HEALTH TIPS

ಪಶ್ಚಿಮ ಬಂಗಾಳದಲ್ಲಿ SIR ಪರಿಶೀಲನೆಗೆ ಜಾರ್ಖಂಡ್, ಒಡಿಶಾದ 200 ನ್ಯಾಯಾಧೀಶರ ನಿಯೋಜನೆ

ಕೋಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪರಿಶೀಲನೆಗಾಗಿ ಜಾರ್ಖಂಡ್ ಮತ್ತು ಒಡಿಶಾದಿಂದ ಸುಮಾರು 200 ನ್ಯಾಯಾಧೀಶರು ಶೀಘ್ರದಲ್ಲೇ ಪಶ್ಚಿಮ ಬಂಗಾಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ0 ಪಟ್ಟಿ(ಎಸ್‌ಐಆರ್) ವೀಕ್ಷಕ ಸುಬ್ರತಾ ಗುಪ್ತಾ ಅವರು ಗುರುವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ನೀಡಿದ ಸಲಹೆಯ ಮೇರೆಗೆ ನ್ಯಾಯಾಧೀಶರ ನಿಯೋಜನೆ ಬಗ್ಗೆ ಶೀಘ್ರದಲ್ಲೇ ಚುನಾವಣಾ ಸಮಿತಿಗೆ ತಿಳಿಸಲಾಗುವುದು ಎಂದು ಗುಪ್ತಾ ಹೇಳಿದ್ದಾರೆ.

"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಫೆಬ್ರವರಿ 24 ರಂದು ಸುಪ್ರೀಂ ಕೋರ್ಟ್ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಲು ಮತ್ತು ನೆರೆಯ ಜಾರ್ಖಂಡ್ ಮತ್ತು ಒಡಿಶಾದಿಂದ ಜಿಲ್ಲಾ ನ್ಯಾಯಾಧೀಶರನ್ನು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯಲ್ಲಿ 80 ಲಕ್ಷ ಅರ್ಜಿಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಲು ಅನುಮತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries