HEALTH TIPS

ಮಲಯಾಳ ಭಾಷಾ ಮಸೂದೆ-ಕಾಸರಗೋಡಿನ ಕನ್ನಡ ಪರ ಸಂಸ್ಥೆಗಳ ಪ್ರತಿನಿಧಿಗಳಿಂದ ಸಮಾಲೋಚನಾ ಸಭೆ- ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ಮಾ.10ರಂದು ವಿಶೇಷ ಸಭೆ

ಕಾಸರಗೋಡು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯ ತನಕ ಮಲಯಾಳ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆಗೆ ಕೇರಳ ರಾಜ್ಯಪಾಲರು ಸಹಿ ಹಾಕಿರುವುದಕ್ಕೆ ಕಾಸರಗೋಡಿನಲ್ಲಿ ಸೇರಿದ ವಿವಿಧ ಕನ್ನಡ ಪರ ಸಂಸ್ಥೆಗಳ ಪ್ರತಿನಿಧಿಗಳ ಸಭೆಯು ತೀವ್ರ ಕಳವಳ ವ್ಯಕ್ತಪಡಿಸಿದೆ.  ಹಿರಿಯ ವಕೀಲ ಐ. ವಿ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ಈ ಬಗ್ಗೆ ಸಮಗ್ರವಾಗಿ ಚರ್ಚಿಸಲು ಹಾಗೂ ಕಾಸರಗೋಡಿನ ಸರ್ವ ಕನ್ನಡಿಗರ ಅಭಿಪ್ರಾಯ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ಮಾ.10ರಂದು ಸಂಜೆ 4.30ಕ್ಕೆ ಕಾಸರಗೋಡು ಬೀರಂತಬೈಲಿನ ಕನ್ನಡ ಅಧ್ಯಾಪಕ ಭವನದಲ್ಲಿ ಕಾಸರಗೋಡಿನ ಕನ್ನಡಿಗರ, ಅಧ್ಯಾಪಕರ ಮತ್ತು ಕಾಸರಗೋಡಿನ ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಲು ತೀರ್ಮಾನಿಸಲಾಯಿತು .

ಈ ಮಸೂದೆಯ ವ್ಯಾಪ್ತಿಯಿಂದ ಕಾಸರಗೋಡನ್ನು ಹೊರತುಪಡಿಸುವಂತೆ ಆಗ್ರಹಿಸಲಾಯಿತು. ಕನ್ನಡ ಮಾಧ್ಯಮ ಮಾತ್ರ ಇರುವ ಕಾಸರಗೋಡಿನ 84 ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಮಲಯಾಳವನ್ನು ಹೇರಲು ಮಲಯಾಳ ಅಧ್ಯಾಪಕರನ್ನು ನೇಮಕ ಮಾಡಿರುವ ಸರ್ಕಾರ ಈ ಮಸೂದೆಯ ಮೂಲಕ ಕಾಸರಗೋಡಿನ ಕನ್ನಡ ಶಾಲೆಗಳನ್ನು, ಇಲ್ಲಿನ ಕನ್ನಡ ಸಂಸ್ಕøತಿಯನ್ನು ನಾಶ ಮಾಡಲು ಮುಂದಾಗಿದೆ. ಭಾರತದ ಸಂವಿಧಾನವು ಕಾಸರಗೋಡಿನ ಕನ್ನಡ ಭಾಷಾ ಅಲ್ಪಸಂಖ್ಯಾತರಿಗೆ ನೀಡಿದ ಸವಲತ್ತುಗಳನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಮಲಯಾಳ ಭಾಷಾ ಮಸೂದೆ 2025- ಇದರ ವಿರುದ್ಧ  ಹೈಕೋರ್ಟಿನಲ್ಲಿ ದಾವೆ ಹೂಡುವುದು ಸೇರಿದಂತೆ  ವಿವಿಧ ಸಾಧ್ಯತೆಗಳ ಕುರಿತು ಸಭೆಯು ಚರ್ಚಿಸಿತು.

ಕರ್ನಾಟಕ ಸಮಿತಿ ಅಧ್ಯಕ್ಷ, ವಕೀಲ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಮಕ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೇಕರೆ ಶಂಕರನಾರಾಯಣ ಭಟ್ , ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯ್ಯಕಟ್ಟೆ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಕೆ. ಬಾಬು, ನಿವೃತ್ತ ಪ್ರಾಧ್ಯಾಪಿಕೆ, ಸಾಹಿತಿ ಡಾ. ಮಹೇಶ್ವರಿ.ಯು, ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ, ನಿವೃತ್ತ ಪ್ರಾಂಶುಪಾಲ ಬೇ.ಸಿ ಗೋಪಾಲಕೃಷ್ಣ, ಕೇರಳ ಲೋಕಸೇವಾ ಆಯೋಗದ ನಿವೃತ್ತ ಅಧೀನ ಕಾರ್ಯದರ್ಶಿ ಗಣೇಶ್ ಪ್ರಸಾದ್  ಪಾಣೂರು,ಮಹಾಲಕ್ಷ್ಮಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries