ತಿರುವನಂತಪುರಂ: ಕೇರಳದಲ್ಲಿ ದಿನೇ ದಿನೇ ತಾಪಮಾನ ಏರುತ್ತಿದೆ. 12 ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ಘೋಷಿಸಲಾಗಿದೆ. ಪಾಲಕ್ಕಾಡ್ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗಬಹುದು. ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗುವ ಸಾಧ್ಯತೆಯಿದೆ.
ತಿರುವನಂತಪುರಂ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ತಾಪಮಾನ 36 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗಬಹುದು. ತಾಪಮಾನವು ಸಾಮಾನ್ಯಕ್ಕಿಂತ ಎರಡರಿಂದ 3 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗಬಹುದು ಎಂದು ಹವಾಮಾನ ವೀಕ್ಷಣಾಲಯ ತಿಳಿಸಿದೆ. ಮುಂದಿನ ದಿನಗಳಲ್ಲಿಯೂ ಹೆಚ್ಚಿನ ತಾಪಮಾನ ಮುಂದುವರಿಯುತ್ತದೆ.

