HEALTH TIPS

ಆಂಧ್ರ‍ಪ್ರದೇಶ: 13 ವರ್ಷದೊಳಗಿನ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ

ಅಮರಾವತಿ: ಆಂಧ್ರಪ್ರದೇಶದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡದಂತೆ ನಿಷೇಧ ಹೇರುವುದಾಗಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಗುರುವಾರ ಘೋಷಿಸಿದ್ದಾರೆ.

ಮುಂದಿನ 90 ದಿನಗಳ ಒಳಗೆ ಈ ನಿಯಮವನ್ನು ಜಾರಿಗೊಳಿಸುವುದಾಗಿಯೂ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳ ಬಳಕೆಯಿಂದಾಗಿ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಷೇಧ ಹೇರುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿರುವಂತೆಯೇ ಆಂಧ್ರ ಸರ್ಕಾರದ ಈ ಕ್ರಮ ಗಮನಸೆಳೆದಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, 'ಈ ನಿರ್ಬಂಧವನ್ನು 13 ವಯಸ್ಸಿನಿಂದ 16ನೇ ವಯಸ್ಸಿನವರೆಗೆ ವಿಸ್ತರಿಸಬಹುದೇ ಎಂಬುದರ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಶೀಘ್ರವೇ ಈ ಸಂಬಂಧಿಸಿದ ನಿರ್ಧಾರವನ್ನೂ ಕೈಗೊಳ್ಳಲಾಗುವುದು' ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries