ಪುದುಚೇರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವು 'ಇಂಡಿಯಾ' ಮೈತ್ರಿಕೂಟದಲ್ಲಿ ಸ್ಪರ್ಧೆ ಮಾಡಲಿದ್ದು, ಸೀಟು ಹಂಚಿಕೆಯ ಗೊಂದಲವು ಸೋಮವಾರ(ಮಾ.23) ಕೊನೆಗೊಂಡಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಡಿಎಂಕೆ 14 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಡಿಎಂಕೆ ಸಂಸದ ಎಸ್. ಜಗತ್ರತ್ನಚಗನ್ ಮತ್ತು ಪಿಸಿಸಿ ಅಧ್ಯಕ್ಷ ವಿ. ವೈಥಿಲಿಂಗಂ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
'ಇಂಡಿಯಾ' ಮೈತ್ರಿಕೂಟದ ವಿಸಿಕೆ ಮತ್ತು ಸಿಪಿಐ ಪಕ್ಷಗಳಿಗೆ ಡಿಎಂಕೆ ತನ್ನ ಕ್ಷೇತ್ರಗಳನ್ನೇ ಬಿಟ್ಟುಕೊಡಲಿದೆ ಎಂದು ತಿಳಿಸಿದ್ದಾರೆ.
2021ರ ವಿಧಾನಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷವು 2ರಲ್ಲಿ ಗೆದ್ದಿದ್ದರೆ, 13 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಡಿಎಂಕೆ 6ರಲ್ಲಿ ಗೆಲುವು ಸಾಧಿಸಿತ್ತು.
ಪುದುಚೇರಿ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದು(ಮಾ.23) ಕೊನೆಯ ದಿನ ಆಗಿದೆ. ಮಾರ್ಚ್ 24ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26ರಳೊಗೆ ನಾಮಪತ್ರ ಹಿಂಪಡೆಯಬಹುದಾಗಿದೆ.
ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ.

