HEALTH TIPS

2011ರ ಜನಗಣತಿ ಆಧಾರದಲ್ಲಿ ಕೇಂದ್ರದಿಂದ ಮಹಿಳಾ ಮೀಸಲಾತಿ ಕಾಯ್ದೆ ಶೀಘ್ರ ಅನುಷ್ಠಾನ

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. 2011ರ ಜನಗಣತಿ ಆಧಾರದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಅದು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವಿತ ಕಾಯ್ದೆ ಅಡಿಯಲ್ಲಿ ಲೋಕಸಭೆಯ ಸ್ಥಾನಗಳ ಒಟ್ಟು ಸಂಖ್ಯೆ 543ರಿಂದ 816ಕ್ಕೆ ಏರಿಕೆಯಾಗಲಿದೆ.

ಇದರಲ್ಲಿ 273 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರಲಿದೆ. ಹೊಸ ಜನಗಣತಿ ಹಾಗೂ ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಈ ಮೀಸಲಾತಿ ಜಾರಿಗೆ ಬರಲಿದೆ ಎಂದು ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ.

ಆದರೆ, ಸರಕಾರ ಕಾಯ್ದೆನ್ನು ಶೀಘ್ರ ಜಾರಿಗೆ ತರಲು ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾನೂನಿಗೆ ತಿದ್ದುಪಡಿ ತರಲು ಹಾಗೂ ಸಂಸತ್ತಿನ ಕೆಳ ಮನೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ವಿಸ್ತರಿಸಲು ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಗುರಿಯನ್ನು ಅದು ಹೊಂದಿದೆ ಎಂದು ಮೂಲಗಳು ಹೇಳಿವೆ.

ಈ ಸಾಂವಿಧಾನಿಕ ತಿದ್ದುಪಡಿಯ ಸುಗಮವಾಗಿ ಅಂಗೀಕಾರಕ್ಕೆ ವ್ಯಾಪಕ ಬೆಂಬಲ ಪಡೆಯಲು ಸರಕಾರ ವಿರೋಧ ಪಕ್ಷಗಳೊಂದಿಗೆ ಅದು ಮಾತುಕತೆಗಳನ್ನು ಆರಂಭಿಸಿದೆ. ಸಂಪುಟ ಸಭೆಯ ಅನುಮೋದನೆ ಪಡೆದ ಬಳಿಕ ಅದು ಈ ಮಸೂದೆಯನ್ನು ಮೊದಲು ರಾಜ್ಯ ಸಭೆಯಲ್ಲಿ ಬಹುಶಃ ಮುಂದಿನ ವಾರ ಮಂಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

2023ರಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಕಾಯ್ದೆಯು ಲೋಕಸಭೆ ಹಾಗೂ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿಯನ್ನು ಒದಗಿಸುತ್ತದೆ. ಆದರೆ, ಕ್ಷೇತ್ರ ಪುನರ್ವಿಗಡಣೆ ಪ್ರಕ್ರಿಯೆ ಬಾಕಿ ಇರುವುದರಿಂದ ಅದು ಇನ್ನೂ ಜಾರಿಗೆ ಬಂದಿಲ್ಲ.

ಸರಕಾರವು ಕ್ಷೇತ್ರ ಪುನರ್ ವಿಂಗಡಣೆಗೆ ಮುನ್ನ ಮೀಸಲಾತಿಯನ್ನು ಜಾರಿಗೊಳಿಸಲು ಮುಂದುವರಿದರೆ, ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿರುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries