HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ಸ್ಪಂದನ-2026 ಕಾರ್ಯಕ್ರಮ

ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದ ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ಪಂದನ (ಬೀಳ್ಕೊಡುಗೆ)ಕಾರ್ಯಕ್ರಮವು ಶನಿವಾರ ವಿದ್ಯಾರ್ಥಿಗಳ ವಿವಿಧ ಚಟುವಟಿಕೆಗಳೊಂದಿಗೆ ನೆರವೇರಿತು.  


ಕಾರ್ಯಕ್ರಮದಲ್ಲಿ ವಿದ್ಯಾಲಯದ ಆಡಳಿತ ಸಮಿತಿ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ್ ಹಿಳ್ಳೆಮನೆ ಅಧ್ಯಕ್ಷತೆ ವಹಿಸಿ, ಜೀವನ ಮೌಲ್ಯಗಳ ಬಗ್ಗೆ ನಾವು ನೀಡಬೇಕಾದ ಮಹತ್ವವನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಬೇಕೆಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ವಸಂತಕುಮಾರಿ ಕೊಂಗೋಟು ಕುಂಬಳೆ ಅವರು, ವಿದ್ಯಾರ್ಥಿಗಳ ನಡೆನುಡಿಗಳ ಬಗ್ಗೆ ಸಲಹೆ ನೀಡಿ, ಮಂದಿನ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಲು ಕಿವಿಮಾತು ಹೇಳಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ ಶುಭ ಹಾರೈಸಿದರು.

ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ವಿದ್ಯಾಲಯಕ್ಕೆ ವಿದ್ಯಾರ್ಥಿಗಳು ಸ್ಪಂದಿಸಬೇಕು. ನಿಮ್ಮನ್ನು ಕಳುಹಿಸಿ ಕೊಡುವುದಲ್ಲ, ಎಂಬ ವಿವರಣೆಯೊಂದಿಗೆ ಸ್ಪಂದನದ ಮೂಲೋದ್ದೇಶವನ್ನು ತಿಳಿಸಿದರು. ಅಧ್ಯಾಪಿಕೆ ಚಿತ್ರಾಸರಸ್ವತಿ ಸಲಹೆ ನೀಡಿದರು. ವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರತೀಕವಾದ ದೀಪಗಳನ್ನು ಸ್ಮರಣಿಕೆಗಳಾಗಿ ನೀಡಲಾಯಿತು. ಒಂಬತ್ತನೆ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮ ಸಂಯೋಜಿಸಿ, ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries