HEALTH TIPS

ಟಿ20 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಸ್ನೇಹಿತನನ್ನೇ ಕೊಂದ ಯುವಕ!

ಹಾಜಿಪುರ: ಭಾರತ-ನ್ಯೂಜಿಲೆಂಡ್ ನಡುವೆ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಥಳಿಸಿ ಕೊಂದಿದ್ದಾನೆ.

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ.ಮೃತನನ್ನು ಕುಂದನ್‌ ಕುಮಾರ್ (17) ಎಂದು ಗುರುತಿಸಲಾಗಿದೆ.

ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದರು. ಪಂದ್ಯದ ನಡುವೆ ಕೂಗಾಟ ಮತ್ತು ಸಂಭ್ರಮಾಚರಣೆ ವಿಚಾರಕ್ಕೆ ಜಗಳ ಶುರುವಾಗಿತ್ತು. ಈ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಗೆಳೆಯನನ್ನು ಕಿಶನ್ ಕುಮಾರ್ ಥಳಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿದ್ದ ಕುಂದನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಬದುಕುಳಿಯಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries