HEALTH TIPS

ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್ ಎನ್ ರವಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ, ತಮಿಳುನಾಡು ಮಾಜಿ ರಾಜ್ಯಪಾಲ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್. ರವಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ನಿನ್ನೆ ಬೆಳಗ್ಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಆರ್ ಎನ್ ರವಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ, ಹಿರಿಯ ಸಚಿವ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಹಾಗೂ ಎಡಪಂಥೀಯ ಅಧ್ಯಕ್ಷ ಬಿಮನ್ ಬೋಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆದರೆ ವಿರೋಧ ಪಕ್ಷ ಬಿಜೆಪಿ ಪಾಳಯದಿಂದ ಯಾವುದೇ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾರ್ಚ್ 5 ರಂದು ಸಿ.ವಿ. ಆನಂದ ಬೋಸ್ ಅವರು ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರಿಂದ ತೆರವಾದ ಸ್ಥಾನಕ್ಕೆ ರವಿ ಅವರನ್ನು ನೇಮಕ ಮಾಡಲಾಗಿತ್ತು.

ರವಿ ಈ ಹಿಂದೆ ನಾಗಾಲ್ಯಾಂಡ್, ಮೇಘಾಲಯ ಮತ್ತು ತಮಿಳುನಾಡು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries