ಬಿಲಾಸಪುರ: ಹಕ್ಕಿ ಜ್ವರ ಪತ್ತೆಯಾದ ಕಾರಣ ಛತ್ತೀಸಗಢದ ಬಿಲಾಸ್‌ಪುರ ಜಿಲ್ಲೆಯ ಸರ್ಕಾರಿ ಸ್ವಾಮ್ಯದ ಫಾರ್ಮ್‌ವೊಂದರಲ್ಲಿದ್ದ 22,808 ಕೋಳಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
'25,896 ಮೊಟ್ಟೆ ಮತ್ತು 79 ಕ್ವಿಂಟಲ್ ಕೋಳಿ ಆಹಾರವನ್ನು ವೈಜ್ಞಾನಿಕ ವಿಧಾನದಲ್ಲಿ ನಾಶಪಡಿಸಲಾಗಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 19ರಿಂದ ಮಾರ್ಚ್ 24ರವರೆಗೆ 4,400 ಕೋಳಿಗಳು ಹಕ್ಕಿಜ್ವರದಿಂದ ಮೃತಪಟ್ಟಿವೆ.
'ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ಪಶುಸಂಗೋಪನೆ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

