ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಗಲ್ಫ್ ದೇಶಗಳಲ್ಲಿರುವ ಸುಮಾರು 23,000 ವಿದ್ಯಾರ್ಥಿಗಳು ಸಿಬಿಎಸ್‌ಇಯ ಅಂತಿಮ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಹಾಗೇ ಇರಾನ್ ದೇಶದಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಜನ ಭಾರತೀಯರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಸತ್ತಿನ ಸ್ಥಾಯಿ ಸಮಿತಿಗೆ ತಿಳಿಸಿದೆ.
ಇರಾನ್‌ನಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಭಾರತೀಯರಿದ್ದು, ಅವರಲ್ಲಿ ಎಲ್ಲರೂ ದೇಶ ತೊರೆಯಲು ಇಚ್ಛಿಸುತ್ತಿಲ್ಲ ಎಂದು ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗಲ್ಫ್ ದೇಶಗಳಲ್ಲಿರುವ 10ನೇ ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಸಿಬಿಎಸ್‌ಇ ಅಂತಿಮ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳ ನಡುವೆ ಈಗಾಗಲೇ ಚರ್ಚೆಗಳು ನಡೆದಿದ್ದು, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ 23,000 ವಿದ್ಯಾರ್ಥಿಗಳಿಗೆ ಸಿಬಿಎಸ್‌ಇ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ತರೂರ್ ಹೇಳಿದರು.

