ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಹಿಂದಿನ ಬಜೆಟ್ ಅಧಿವೇಶನದಲ್ಲಿ ತಟಸ್ಥತೆಯನ್ನು ತ್ಯಜಿಸಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಿದ್ದಾರೆ ಎಂದು ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್ ಅವರು ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ "ವಿಪಕ್ಷದ 240 ಸಂಸದರನ್ನು" ಅಮಾನತುಗೊಳಿಸುವ ಸಂಚು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.
ಂಓI ಜೊತೆ ಮಾತನಾಡಿದ ಟ್ಯಾಗೋರ್, "ಸ್ಪೀಕರ್ ತಟಸ್ಥವಾಗಿ ವರ್ತಿಸಬೇಕು. ಆದರೆ ಅದು ನಡೆಯುತ್ತಿಲ್ಲ. ಸ್ಪೀಕರ್ ವಿರೋಧ ಪಕ್ಷದ ಸದಸ್ಯರನ್ನು ಮಾತನಾಡಲು ಬಿಡುವುದಿಲ್ಲ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕು ಎಂದಿದ್ದಾರೆ.

