ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಬ್ರಸೆಲ್ಸ್‌ಗೆ ಭಾನುವಾರ ಭೇಟಿ ನೀಡಿದರು. ಎರಡು ದಿನಗಳ ಭೇಟಿ ಸಂದರ್ಭದಲ್ಲಿ ಅವರು ಐರೋಪ್ಯ ಒಕ್ಕೂಟದ 27 ದೇಶಗಳ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಮುಕ್ತ ವ್ಯಾಪಾರ ಒಪ್ಪಂದದ ಬಳಿಕ ಇದೇ ಮೊದಲ ಬಾರಿಗೆ ಅವರು ಭೇಟಿ ನೀಡಿದ್ದಾರೆ.
'ಐರೋಪ್ಯ ಒಕ್ಕೂಟದ ಪ್ರತಿನಿಧಿ ಮತ್ತು ಉಪಾಧ್ಯಕ್ಷ ಕಾಜಾ ಕಲ್ಲಾಸ್ ಅವರ ಆಹ್ವಾನದ ಮೇರೆಗೆ ಬೆಲ್ಜಿಯಂ ರಾಜಧಾನಿಗೆ ಭೇಟಿ ನೀಡಿದ್ದೇನೆ. ಈ ಸಂದರ್ಭದಲ್ಲಿ27 ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂವಾದ ನಡೆಸಲಿದ್ದೇನೆ' ಎಂದು ಜೈಶಂಕರ್ ತಿಳಿಸಿದ್ದಾರೆ.

