HEALTH TIPS

ಪಶ್ಚಿಮ ಬಂಗಾಳ ಚುನಾವಣೆ: 284 ಅಭ್ಯರ್ಥಿಗಳ ಮೊದಲ ಕಾಂಗ್ರೆಸ್ ಪಟ್ಟಿ ಬಿಡುಗಡೆ!

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 284 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಬಹರಂಪುರದಿಂದ ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಅಧೀರ್ ರಂಜನ್ ಚೌಧುರಿ ಮತ್ತು ಮಾಲತಿಪುರದಿಂದ ಟಿಎಂಸಿ ಮಾಜಿ ಸಂಸದ ಮೌಸಮ್ ನೂರ್ ಅವರನ್ನು ಕಣಕ್ಕಿಳಿಸಿದೆ.

ರಾಜ್ಯದ 294 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಒಂದೇ ಬಾರಿಗೆ 284 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಡಾರ್ಜಿಲಿಂಗ್‌ನಿಂದ ಮಧಪ್ ರೈ, ಸುಜಾಪುರದಿಂದ ಅಬ್ದುಲ್ ಹನ್ನಾನ್, ದಮ್ ಡಮ್‌ನಿಂದ ಸುಸ್ಮಿತಾ ಬಿಸ್ವಾಸ್, ಡೈಮಂಡ್ ಹಾರ್ಬರ್‌ನಿಂದ ಗೌತಮ್ ಭಟ್ಟಾಚಾರ್ಯ, ಅಸನ್ಸೋಲ್ ದಕ್ಷಿಣದಿಂದ ಸೌವಿಕ್ ಮುಖರ್ಜಿ, ಉತ್ತರ ಅಸನ್ಸೋಲ್ ನಿಂದ ಪ್ರಸೇನಜಿತ್ ಪುಯಿತಾಂಡಿ ಅವರಿಗೆ ಟಿಕೆಟ್ ನೀಡಿದೆ.

ಕೋಲ್ಕತ್ತಾದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಕಾಂಗ್ರೆಸ್ ವರಿಷ್ಠರು ವಿವರವಾದ ಚರ್ಚೆ ನಡೆಸಿದ ಒಂದು ದಿನದ ನಂತರ ಅಭ್ಯರ್ಥಿಗಳ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಪಶ್ಚಿಮ ಬಂಗಾಳದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

294 ವಿಧಾನಸಭಾ ಸ್ಥಾನಗಳಿಗೆ ಪಕ್ಷವು 2,500 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಪಶ್ಚಿಮ ಬಂಗಾಳ ಉಸ್ತುವಾರಿ ಗುಲಾಂ ಅಹ್ಮದ್ ಮೀರ್ ಸುದ್ದಿಗಾರರಿಗೆ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries