ಪೆರ್ಲ: ಎಣ್ಮಕಜೆ ಪಂಚಾಯಿತಿ ನೆಲ್ಲಿಕುಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನ:ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವ ದೇಲಂಪಾಡಿ ಬ್ರಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಮಾ. 29ರಿಂದ ಏ. 3ರ ವರೆಗೆ ಜರುಗಲಿದೆ. ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ತತ್ಕರಕಮಲ ಸಂಜಾತ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ದಿವ್ಯಾನುಗ್ರಹ, ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಪೂರ್ಣಾನುಗ್ರಹ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯುವುದು.
ಮಾ. 29ರಂದು ಬೆಳಗ್ಗೆ 9ಕ್ಕೆ ಉಗ್ರಾಣ ಮುಹೂರ್ತ, 10ಕ್ಕೆ ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಿಂದ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ನೆಲ್ಲಿಕುಂಜೆ ಕ್ಷೇತ್ರಕ್ಕೆ ಹೊರಡುವುದು. ಸಂಜೆ 5ಕ್ಕೆ ತಂತ್ರಿವರ್ಯರಿಗೆ ಪೂರ್ಣಕುಂಭ ಸ್ವಾಗತ, ಸಂಜೆ 7ಕ್ಕೆ ದೀಪ ಪ್ರಜ್ವಲನೆಯೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯುವುದು.
ಪ್ರತಿ ದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿರುವುದು. 30ರಂದು ಸಂಜೆ 4ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಉಪನ್ಯಾಸಕ ಡಾ. ರವೀಶ ಪಡುಮಲೆ ಧಾರ್ಮಿಕ ಭಾಷಣ ಮಾಡುವರು.
ಏ. 1ರಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆ ಸುಲೋಚನಾ ಜಿ.ಕೆ ಭಟ್ ಧಾರ್ಮಿಕ ಭಾಷಣ ಮಾಡುವರು. 2ರಂದು ಬೆಳಗ್ಗೆ ಗಣಪತಿ ಹವನ, ವಿವಿಧ ಕಲಶಪೂಜೆ, ಜೀವಕಲಶ ಪೂಜೆ, ಬ್ರಹ್ಮಕಲಶ ಪೂಜೆ ನಡೆಯುವುದು. 3ರಂದು ಬೆಳಗ್ಗೆ 5ಕ್ಕೆ 108ಕಾಯಿ ಗಣಪತಿ ಹೋಮ, ಪ್ರತಿಷ್ಠಾ ಪಾಣಿ,9.21ರ ವೃಷಭಲಗ್ನ ಸುಮುಹೂರ್ತದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಪ್ರತಿಷ್ಠಾ ಬಲಿ ನಡೆಯುವುದು
ಮಧ್ಯಾಹ್ನ 3ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಭಾಷಣ ಮಾಡುವರು. ಶೃಂಗೇರಿ ಶ್ರೀಶಾರದಾಪೀಠ ಕೋಟೆಕಾರು ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ ಹಗೂ ಕರ್ನಾಟಕ ಬ್ಯಾಂಕ್ ಎಂಡಿ ರಾಘವೇಂದ್ರ ಶ್ರೀನಿವಾಸ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.



