HEALTH TIPS

ಸುಖೋಯ್‌-30 ಎಂಕೆಐ ಯುದ್ಧ ವಿಮಾನ ಪತನ: ವಾಯುಪಡೆಯ ಇಬ್ಬರು ಪೈಲಟ್‌ಗಳು ಸಾವು

ಅಸ್ಸಾಂ: ಇಲ್ಲಿನಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾರ ಐಎಎಫ್‌ನ ಸುಖೋಯ್‌ -30 ಎಂಕೆಐ ಯುದ್ಧ ವಿಮಾನ ಪತನಗೊಂಡಿದ್ದು, ವಾಯುಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಭಾರತೀಯ ವಾಯುಪಡೆಯ (IAF) ಮಾಧ್ಯಮ ಸಮನ್ವಯ ಘಟಕ, Su-30 ಯುದ್ಧ ವಿಮಾನ ಪತನಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದೆ.

ಇವರ ನಿಧನಕ್ಕೆ ಐಎಎಫ್‌ನ ಎಲ್ಲಾ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ಮೃತ ಕುಟುಂಬದೊಂದಿಗೆ ನಾವಿದ್ದೇವೆ ಎಂದೂ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ತರಬೇತಿ ಕಾರ್ಯಾಚರಣೆಯಲ್ಲಿದ್ದ ಸುಖೋಯ್‌ -30 ಎಂಕೆಐ, ಜೋರ್ಹಾಟ್‌ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಕರ್ಬಿ ಅಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಐಎಎಫ್‌ ಪ್ರಕಟಣೆಯಲ್ಲಿ ತಿಳಿಸಿದೆ.

'ರಷ್ಯಾ ನಿರ್ಮಿತ ಸುಖೋಯ್‌ ಯುದ್ಧ ವಿಮಾನವು ಟೇಕಾಫ್‌ ಆದ ಬಳಿಕ ಸಂಜೆ 7.42ರ ಸುಮಾರಿಗೆ ಸಂಪರ್ಕ ಕಳೆದುಕೊಂಡಿತ್ತು.

ಸುಖೋಯ್‌- 30 ಎಂಕೆಐ, ಎರಡು ಆಸನಗಳಿರುವ ದೀರ್ಘ ಶ್ರೇಣಿಯ ಯುದ್ಧ ವಿಮಾನವಾಗಿದ್ದು, ಸುಖೋಯ್‌ನ 260 ಯುದ್ಧ ವಿಮಾನಗಳ ಸಮೂಹವನ್ನು ಐಎಎಫ್‌ ಒಳಗೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries