ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಮಾ. 30 ಸೋಮವಾರ ಮಧ್ಯಾಹ್ನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯೊಂದಿಗೆ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ಜರಗಲಿರುವುದು. ಅದೇ ದಿನ ಸಂಜೆ 06.30 ರಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ "ವೀರ ಅಭಿಮನ್ಯು, ಗದಾಯುದ್ಧ, ಗಿರಿಜಾ ಕಲ್ಯಾಣ" ಯಕ್ಷಗಾನ ಬಯಲಾಟ ನಡೆಯಲಿದೆ.
ಭಗವದ್ಭಕ್ತರು ಹಾಗೂ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಬಂಧ ಪಟ್ಟವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

