HEALTH TIPS

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ವಿಮಾನಯಾನ ಸಂಸ್ಥೆಗಳ 350 ವಿಮಾನಗಳ ಹಾರಾಟ ರದ್ದು

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ ದೆಹಲಿ ಮತ್ತು ಮುಂಬೈನಿಂದ ತೆರಳಬೇಕಿದ್ದ 225 ಸೇರಿದಂತೆ ಭಾರತದಿಂದ ತೆರಳಬೇಕಿದ್ದ 350 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಏಷ್ಯಾ ದೇಶಗಳಿಗೆ ತೆರಳಬೇಕಿದ್ದ 444 ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವ ನಿರೀಕ್ಷೆಯಿತ್ತು. ಸದ್ಯ 350 ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಶನಿವಾರವೂ ದೇಶೀಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.

'ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಒದಗಿಸುವಂತೆ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು ಮತ್ತು ಇತರ ಪಾಲುದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 60 ಮತ್ತು ಆಗಮಿಸಬೇಕಿದ್ದ 40 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಮುಂಬೈ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 67 ಮತ್ತು ಆಗಮಿಸಬೇಕಿದ್ದ 58 ವಿಮಾನಗಳ ಹಾರಾಟ ರದ್ದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries