ಕಾಸರಗೋಡು: ಜಿಲ್ಲಾ ಯೋಜನಾ ಸಮಿತಿ ಸಭೆಯು 38 ಸ್ಥಳೀಯಾಡಳಿತ ಸಂಸ್ಥೆಗಳ 2026-27ನೇ ವಾರ್ಷಿಕ ಯೋಜನೆಗಳಿಗೆ ಅನುಮೋದನೆ ನೀಡಿತು. ಜಿಲ್ಲಾ ಯೋಜನಾ ಸಮಿತಿ ಸಭಾಂಗಣದಲ್ಲಿ ನಿನ್ನೆ ನಡೆದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ ವಹಿಸಿ, ಸ್ಥಳೀಯ ಆರ್ಥಿಕ ಅಭಿವೃದ್ಧಿ ಸೇರಿದಂತೆ ಅಗತ್ಯ ಯೋಜನೆಗಳಿಗೆ ಅನುಮೋದನೆ ನೀಡಿದರು. ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೆ. ಇಂನ್ಬಾಶೇಖರ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಮಾತನಾಡಿದರು. ಸ್ಥಳೀಯಾಡಳಿತ ಸಂಸ್ಥೆಗಳ ಸುಗಮ ಕಾರ್ಯನಿರ್ವಹಣೆಗೆ ಜಿಲ್ಲಾಡಳಿತದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಅವರು ಹೇಳಿದರು. ಎಲ್ಲರ ಮಾತುಗಳನ್ನು ಆಲಿಸಿ ಸಮಸ್ಯೆಗಳನ್ನು ಅರ್ಥಮಾಡಿಕೊಂಡ ನಂತರ ಮುಂದುವರಿಯುವುದಾಗಿ ಹೇಳಿದರು.
ಜಿಲ್ಲಾ ಯೋಜನಾ ಅಧಿಕಾರಿ ಟಿ. ರಾಜೇಶ್ ವರದಿ ಮಂಡಿಸಿದರು. 38 ಸ್ಥಳೀಯಾಡಳಿತ ಸಂಸ್ಥೆಗಳ ವಾರ್ಷಿಕ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್, ಪಿಲಿಕೋಡ್ ಗ್ರಾಮ ಪಂಚಾಯತ್, ಕಾಞಂಗಾಡ್ ಬ್ಲಾಕ್ ಪಂಚಾಯತ್, ಮಧೂರು ಗ್ರಾಮ ಪಂಚಾಯತ್ ಮತ್ತು ವಲಿಯಪರಂಬ ಗ್ರಾಮ ಪಂಚಾಯತ್‍ನ ವಾರ್ಷಿಕ ಯೋಜನೆಗಳಲ್ಲಿನ ತಿದ್ದುಪಡಿಗಳನ್ನು ಸಮಿತಿಯು ಪರಿಗಣಿಸಿ ಅನುಮೋದಿಸಿತು. ಅಜಾನೂರು ಗ್ರಾಮ ಪಂಚಾಯತ್, ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಈಸ್ಟ್ ಎಳೇರಿ ಗ್ರಾಮ ಪಂಚಾಯತ್‍ನ ಆರೋಗ್ಯ ಅನುದಾನ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

.jpeg)
.jpeg)
