HEALTH TIPS

ಛತ್ತೀಸಗಢ: ಕಳೆದ ಎರಡು ವಾರದಲ್ಲಿ 3,841 ಎಲ್‌ಪಿಜಿ ಸಿಲಿಂಡರ್‌ ವಶ

 ಜೈಪುರ: ಅಡುಗೆ ಅನಿಲ ಸಂಗ್ರಹಣೆಯನ್ನು ತಡೆಗಟ್ಟುವ ಕ್ರಮದ ಭಾಗವಾಗಿ ಛತ್ತೀಸಗಢ ಅಧಿಕಾರಿಗಳು, ಕಳೆದ ಎರಡು ವಾರದಲ್ಲಿ ರಾಜ್ಯದ 335 ಕಡೆಗಳಲ್ಲಿ ಒಟ್ಟು 3,841 ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. 

ಪಶ್ಚಿಮ ಏಷ್ಯಾ ಸಂಘರ್ಷದಿಂದ ಎಲ್‌ಪಿಜಿ ಕೊರತೆ ಉಂಟಾಗಿರುವ ನಡುವೆ, ಎಲ್‌ಪಿಜಿಯ ಲಭ್ಯತೆ, ವಿತರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಕುರಿತು ಮುಖ್ಯಮಂತ್ರಿ ವಿಷ್ಣುದೇವ್‌ ಸಾಯ್‌ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಯಿತು.

ಕಾಳಸಂತೆಯಲ್ಲಿ ಸಿಲಿಂಡರ್‌ಗಳನ್ನು ಮಾರಾಟ ಮಾಡುವುದು ದೃಢಪಟ್ಟಿಲ್ಲ. ಆದರೆ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, 97 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಅಡುಗೆ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು, ಪೂರೈಕೆಯನ್ನು ಗಮನಿಸುವಂತೆ ಹಾಗೂ ಸಂಗ್ರಹಣೆ ಮತ್ತು ಲಾಭಕೋರತನದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಗತ್ಯ ಸೇವೆಗಳನ್ನು ಸಕಾಲಿಕವಾಗಿ ತಲುಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ನಾಗರಿಕರು ಭಯಭೀತರಾಗಬಾರದು ಎಂದು ಅವರು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries