HEALTH TIPS

ಕೆಬಿಸಿಯಲ್ಲಿ ₹50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅಮಿತಾ ಸಿಂಗ್ ತೋಮರ್ ಬಂಧನ

 ಭೋಪಾಲ್: 'ಕೌನ್‌ ಬನೇಗಾ ಕರೋಡ್‌ಪತಿ' ಕಾರ್ಯಕ್ರಮದಲ್ಲಿ ₹50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅಮಿತಾ ಸಿಂಗ್ ತೋಮರ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. 


ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ₹2.5 ಕೋಟಿ ಪ್ರವಾಹ ಪರಿಹಾರ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2021ರಲ್ಲಿ ಬರೋಡಾದಲ್ಲಿ ನಡೆದ ಹಗರಣ ಆರೋಪದ ಮೇಲೆ ಅಮಿತಾ ಸಿಂಗ್ ತೋಮರ್‌ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಅವರನ್ನು ಶಿವಪುರಿಯ ಜೈಲಿನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬರೋಡಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (SಆಔP) ಅವನೀತ್ ಶರ್ಮಾ ನೇತೃತ್ವದ ತಂಡವು ಅಮಿತಾ ಸಿಂಗ್‌ ಅವರನ್ನು ಬಂಧಿಸಿತು. 2021ರ ಪ್ರವಾಹ ಪರಿಹಾರ ಹಗರಣದಲ್ಲಿ ಈವರೆಗೂ ತಹಶೀಲ್ದಾರ್‌ ಮತ್ತು ಕಂದಾಯ ಇಲಾಖೆಯ 22 ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ದುರುಪಯೋಗದ ಉದ್ದೇಶಕ್ಕಾಗಿ ನಕಲಿ ಬ್ಯಾಂಕ್ ಖಾತೆಗಳಿಗೆ ₹2.5 ಕೋಟಿಯನ್ನು ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ಸುಮಾರು 110 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣವನ್ನು ಬರೋಡಾದ ಎಸ್‌ಡಿಒಪಿ ತಂಡ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries