HEALTH TIPS

ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: ಒಂದೇ ಕುಟುಂಬದ 7 ಮಂದಿ ಸಾವು

 ದೆಹಲಿ: ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಪಾಲಂನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 


ಬೆಂಕಿ ಅವಘಡದ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು ಇಬ್ಬರು ಕಟ್ಟಡದಿಂದ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿಯ ಪಾಲಂ ಮೆಟ್ರೊ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.

ಐದು ಅಂತಸ್ತಿನ ಕಟ್ಟಡದ ಎರಡನೇ ಹಾಗೂ ಮೂರನೇ ಮಹಡಿಯು ವಸತಿ ಸಮುಚ್ಚಯಗಳಾಗಿದ್ದವು.

ತನಿಖೆಗೆ ಸಿಎಂ ಆದೇಶ...

ಘಟನೆ ಸಂಬಂಧ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ರೇಖಾ ಗುಪ್ತಾ, ತನಿಖೆಗೆ ಆದೇಶಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries