HEALTH TIPS

ದಾಸ್ತಾನು ಇರುವ ತೈಲ ಮಾರುಕಟ್ಟೆಗೆ: ಜಿ7 ರಾಷ್ಟ್ರಗಳ ನಡುವೆ ಮೂಡದ ಒಮ್ಮತ

ವಾಷಿಂಗ್ಟನ್: ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ನಡೆಸುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಜಾಗತಿಕ ಇಂಧನ ಪೂರೈಕೆಯನ್ನು ಬೆಂಬಲಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧ ಎಂದು ಜಿ7 ರಾಷ್ಟ್ರಗಳು ಸೋಮವಾರ ಘೋಷಿಸಿವೆ.

ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ (ಐಇಎ) ವರ್ಚುವಲ್‌ ಸಭೆ ನಡೆದಿದ್ದು, ತುರ್ತು ಸಂದರ್ಭದಲ್ಲಿ ಬಳಕೆಗಾಗಿ ದಾಸ್ತಾನು ಮಾಡಿರುವ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಈ ದೇಶಗಳ ನಡುವೆ ಒಮ್ಮತ ಮೂಡಲಿಲ್ಲ.

ಸೋಮವಾರ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ ಸುಮಾರು 120 ಡಾಲರ್‌ಗೆ ತಲುಪಿದೆ. ಇದರಿಂದಾಗಿ ಜಾಗತಿಕ ಷೇರು ಮಾರುಕಟ್ಟೆಗಳು ಕುಸಿತ ಕಂಡಿವೆ.

'ಇತ್ತೀಚಿನ ದಿನಗಳಲ್ಲಿ ಜಾಗತಿಕ ತೈಲ ಮಾರುಕಟ್ಟೆಗಳ ಪರಿಸ್ಥಿತಿ ತೀರಾ ಹದಗೆಟ್ಟಿವೆ' ಎಂದು ಐಎಇ ಮುಖ್ಯಸ್ಥ ಫಾತಿಹ್‌ ಬಿರೋಲ್‌ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries