ಬೈರೂತ್: ಹಿಜ್ಬುಲ್ಲಾ ಬಂಡುಕೋರ ಭದ್ರಕೋಟೆಯಾಗಿರುವ ಬೈರೂತ್‌ನ ದಕ್ಷಿಣ ಭಾಗದ ಪ್ರದೇಶಗಳ ಮೇಲೆ ಇಸ್ರೇಲ್ ಪಡೆಗಳು ಗುರುವಾರ ದಾಳಿ ನಡೆಸಿವೆ. ಘಟನೆಯಲ್ಲಿ 8 ಮಂದಿ ಮೃತರಾಗಿದ್ದಾರೆ.
ನಬತೀಹ್ ಪ್ರಾಂತ್ಯದ ಗ್ರಾಮವೊಂದರ ಮೇಲೆ ದಾಳಿ ನಡೆದಿದ್ದು, ಗ್ರಾಮದ ಮೇಯರ್ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.
ನಂತರ ಅಲ್ಲಿಯೇ ಸಮೀಪದ ಗ್ರಾಮವೊಂದರ ಮೇಲೂ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಹಾಗೂ ಅವರ ಪೋಷಕರು ಮೃತಪಟ್ಟಿದ್ದಾರೆ. ಝಹ್ಲಾ ಎಂಬಲ್ಲಿಯೂ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ದಕ್ಷಿಣ ಲೆಬನಾನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ಕ್ಷಿಪ್ರಗೊಳಿಸಲಾಗುವುದು ಹೀಗಾಗಿ ಜನರು ಆ ಪ್ರದೇಶಗಳನ್ನು ಖಾಲಿ ಮಾಡಬೇಕು ಎಂದು ಇಸ್ರೇಲ್ ಪಡೆಗಳು ಗುರುವಾರ ಎಚ್ಚರಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆಯೂ ಇಸ್ರೇಲ್ ಇದೇ ರೀತಿಯ ಸೂಚನೆಗಳನ್ನು ನೀಡಿತ್ತು.

