HEALTH TIPS

ಇರಾನ್‌ನಲ್ಲಿ ಪ್ರಸ್ತುತ 9,000 ಭಾರತೀಯ ಪ್ರಜೆಗಳಿದ್ದಾರೆ : ರಾಜ್ಯಸಭೆಗೆ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪ್ರಸ್ತುತ ಇರಾನ್‌ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.

ಇರಾನ್‌ನಲ್ಲಿರುವ ಭಾರತೀಯ ನಾಗರಿಕರ ವಿವರಗಳು ಮತ್ತು ಅವರ ಸುರಕ್ಷತೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪ್ರಶ್ನೆ ಕೇಳಲಾಗಿತ್ತು.

ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ, ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಸ್ಥಳೀಯ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನಿರಂತರವಾಗಿ ಗಮನಿಸಬೇಕು ಮತ್ತು ಅಗತ್ಯವಿದ್ದರೆ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಭಾರತೀಯ ರಾಯಭಾರಿ ಕಚೇರಿ ಸಲಹೆ ನೀಡಿದೆ ಎಂದು ಹೇಳಿದ್ದಾರೆ.

ಭಾರತೀಯ ರಾಯಭಾರ ಕಚೇರಿಯಿಂದ ತುರ್ತು ಸಹಾಯವಾಣಿಗಳನ್ನು ಸಕ್ರಿಯಗೊಳಿಸಲಾಗಿದೆ. ಭಾರತೀಯರ ರಕ್ಷಣೆಗೆ ಸಂಬಂಧಿಸಿ ಇರಾನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಸಚಿವರು ರಾಜ್ಯಸಭೆಗೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries