ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಂಡಿರುವ ಹಿನ್ನೆಲೆ ಇರಾನ್, ಇಸ್ರೇಲ್ ಸೇರಿ 9 ದೇಶಗಳ ವಾಯುಪ್ರದೇಶದಲ್ಲಿ ಹಾರಾಟ ನಡೆಸದಂತೆ ಭಾರತೀಯ ವಿಮಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಸೂಚಿಸಿದೆ.
ಬಹರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳ ವಾಯುಪ್ರದೇಶದಲ್ಲಿ ಹಾರಾಟ ನಡೆಸದಂತೆ ಡಿಜಿಸಿಎ ತಿಳಿಸಿದೆ.
ಅದಾಗ್ಯೂ, ಒಮಾನ್ ಮತ್ತು ಸೌದಿ ಅರೇಬಿಯಾದ ವಾಯುಪ್ರದೇಶಗಳಲ್ಲಿ ಕೆಲವು ನಿರ್ದಿಷ್ಟ ಷರತ್ತುಗಳಿಗೆ ಒಳಪಟ್ಟು ವಿಮಾನ ಸಂಚಾರ ನಡೆಸಲು ಅನುಮತಿ ನೀಡಲಾಗಿದೆ.
ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮಾರ್ಚ್ 28 ರವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಡಿಜಿಸಿಎ ತಿಳಿಸಿದೆ.

