HEALTH TIPS

ಸೌದಿ ಅರೇಬಿಯ | ಡ್ರೋನ್ ದಾಳಿ ಬಳಿಕ ರಾಸ್ ತನೂರಾ ತೈಲ ಸಂಸ್ಕರಣಾಗಾರ ಸ್ಥಗಿತಗೊಳಿಸಿದ Aramco

ರಿಯಾದ್/ಲಂಡನ್: ಡ್ರೋನ್ ದಾಳಿಯ ನಂತರ ಸೌದಿ ಅರೇಬಿಯಾದ ದಮಾಮ್-ಜುಬೈಲ್ ಬಳಿಯ ರಾಸ್ ತನೂರಾ ತೈಲ ಸಂಸ್ಕರಣಾಗಾರದಲ್ಲಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ reuters.com ವರದಿ ಮಾಡಿದೆ.

ಪರ್ಷಿಯನ್ ಕೊಲ್ಲಿಯ ತೀರದಲ್ಲಿರುವ ಈ ಪ್ರಮುಖ ತೈಲ ಸ್ಥಾವರವನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಮುಚ್ಚಲಾಗಿದೆ.

ಹಾನಿಯ ಪ್ರಮಾಣವನ್ನು ಅಂದಾಜಿಸಲು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ಇನ್ನೂ ಬಹಿರಂಗವಾಗದ ಕಾರಣ ಹೆಸರು ಬಹಿರಂಗಪಡಿಸಬಾರದು ಎಂಬ ಷರತ್ತಿನಡಿ ಮೂಲವು ವಿವರಗಳನ್ನು ನೀಡಿದೆ. ದಾಳಿಯಿಂದ ಸ್ಥಳದಲ್ಲಿ ಉಂಟಾದ ಬೆಂಕಿ ನಿಯಂತ್ರಣದಲ್ಲಿದೆ ಎಂದು ತಿಳಿದು ಬಂದಿದೆ.

ಸೌದಿ ಅರೇಬಿಯಾದ ಅತಿದೊಡ್ಡ ಸಂಸ್ಕರಣಾಗಾರಗಳಲ್ಲಿ ಒಂದಾಗಿರುವ ರಾಸ್ ತನುರಾ ಘಟಕವು ದಿನಕ್ಕೆ ಸುಮಾರು 5.5 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ. ಜಾಗತಿಕ ಇಂಧನ ಸರಬರಾಜಿನಲ್ಲಿ ಮಹತ್ವದ ಪಾತ್ರವಹಿಸುವ ಈ ಘಟಕ ಸ್ಥಗಿತಗೊಂಡಿರುವುದು ಮಾರುಕಟ್ಟೆಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ಘಟನೆ ಕುರಿತು Saudi Aramco ಮಾಧ್ಯಮ ವಿಭಾಗದಿಂದ ತಕ್ಷಣ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ನಡುವೆ ಮಧ್ಯಪ್ರಾಚ್ಯದಲ್ಲಿ ವಾರಾಂತ್ಯದಲ್ಲಿ ಯುದ್ಧ ವಾತಾವರಣ ತೀವ್ರಗೊಂಡ ಹಿನ್ನೆಲೆಯಲ್ಲಿ ಲಂಡನ್ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 9.7 ಶೇಕಡಾ ಏರಿಕೆಯಾಗಿದೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ನಂತರ, ಟೆಹ್ರಾನ್ ಪ್ರತೀಕಾರ ಕ್ರಮವಾಗಿ ಪ್ರದೇಶದ ಸುತ್ತಮುತ್ತಲಿನ ದೇಶಗಳತ್ತ ನೂರಾರು ಕ್ಷಿಪಣಿಗಳು ಹಾಗೂ ಡ್ರೋನ್‌ಗಳನ್ನು ಹಾರಿಸಿವೆ.

ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯು ಜಾಗತಿಕ ತೈಲ ಮಾರುಕಟ್ಟೆಗೆ ದುಃಸ್ವಪ್ನದಂತಾಗಿದೆ. ಉದ್ವಿಗ್ನತೆ ಹೆಚ್ಚುತ್ತಿರುವಂತೆ ನಿರ್ಣಾಯಕ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸಮುದ್ರ ಸಂಚಾರವು ಈಗಾಗಲೇ ಬಹುತೇಕ ಸ್ಥಗಿತಗೊಂಡಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಸೌದಿ ಅರೇಬಿಯ ಹೇಳಿದ್ದೇನು?

ಸೌದಿ ಅರೇಬಿಯಾದ ಪೂರ್ವ ಭಾಗದಲ್ಲಿರುವ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ನಡೆದ ಡ್ರೋನ್ ದಾಳಿ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ದಾಳಿ ಮಾಡಲು ಪ್ರಯತ್ನಿಸಿದ ಎರಡು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆ ತಡೆದು ನಾಶಪಡಿಸಿರುವುದಾಗಿ ರಕ್ಷಣಾ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ.

ಸರ್ಕಾರಿ ಸ್ವಾಮ್ಯದ ಎಸ್‌ಪಿಎ ಸುದ್ದಿ ಸಂಸ್ಥೆ ವರದಿ ಮಾಡಿದಂತೆ, ಇಂದು ಬೆಳಿಗ್ಗೆ ಸಂಸ್ಕರಣಾಗಾರ ದಿಕ್ಕಿನಲ್ಲಿ ಚಲಿಸುತ್ತಿದ್ದ ಡ್ರೋನ್‌ಗಳನ್ನು ಮುಂಚಿತವಾಗಿ ಪತ್ತೆಹಚ್ಚಿ ಮಧ್ಯಾಕಾಶದಲ್ಲೇ ಹೊಡೆದುರುಳಿಸಲಾಗಿದೆ. ಪ್ರತಿರೋಧ ಕಾರ್ಯಾಚರಣೆಯ ವೇಳೆ ಡ್ರೋನ್ ಅವಶೇಷಗಳು ನೆಲಕ್ಕುರುಳಿದ ಪರಿಣಾಮ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ ಹಾಗೂ ಗಾಯಾಳುಗಳಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಬೆಂಕಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದ್ದು, ಸಂಸ್ಕರಣಾಗಾರದ ಸಾಮಾನ್ಯ ಕಾರ್ಯಾಚರಣೆಗಳಿಗೆ ವ್ಯತ್ಯಯ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries