HEALTH TIPS

Assam: ಕಾಂಗ್ರೆಸ್‌ನಿಂದ ಬಂದ ನಾಯಕ ಸೇರಿದಂತೆ 88 ಮಂದಿಗೆ ಟಿಕೆಟ್‌ ಘೋಷಿಸಿದ BJP

 ದಿಸ್ಪುರ್‌: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ 88 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. 


ಪಕ್ಷದ ಪ್ರಮುಖ ನಾಯಕ, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಜಲುಕ್ಬರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 2001ರಿಂದ ಈವರಗೆ ಸತತ ಐದು ಬಾರಿ ಸ್ಪರ್ಧಿಸಿ ಜಯ ಸಾಧಿಸಿರುವ ಶರ್ಮಾ, ಈ ಕ್ಷೇತ್ರವನ್ನು ತಮ್ಮ ಭದ್ರಕೋಟೆಯನ್ನಾಗಿಸಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಪ್ರದ್ಯುತ್‌ ಬೋರ್ದೋಲೋಯಿ ಅವರಿಗೆ ದಿಸ್ಪುರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಘೋಷಿಸಲಾಗಿದೆ.

ಸಚಿವ ಜಯಂತ ಮುಲ್ಲಾ ಬರೌ ಅವರು ನಲ್ಬಾರಿಯಿಂದ ಕಣಕ್ಕಿಳಿಯಲಿದ್ದಾರೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಏಪ್ರಿಲ್‌ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮಾರ್ಚ್‌ 23ರವರೆಗೆ ನಾಮಪತ್ರ ಸಲ್ಲಿಕೆಸಬಹದಾಗಿದ್ದು, ಹಿಂಪಡೆಯಲು ಮಾರ್ಚ್‌ 26 ಕೊನೇ ದಿನವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries