ಸುಕ್ಮಾ: ಛತ್ತೀ ಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದರು.
ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾದ ನಕ್ಸಲರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಭದ್ರತಾ ಪಡೆಗಳ ಗುಂಡಿಗೆ 285 ನಕ್ಸಲರು ಬಲಿಯಾಗಿದ್ದರು.

