HEALTH TIPS

ಗುಜರಾತ್ ವಿಧಾನಸಭೆ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ | ಪೊಲೀಸರಿಂದ ಪರಿಶೀಲನೆ

ಗಾಂಧಿನಗರ: ಗುಜರಾತ್ ವಿಧಾನ ಸಭೆ ಸಂಕೀರ್ಣ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ವಿಧಾನ ಸಭೆ ಸಂಕೀರ್ಣದ ಆವರಣದಲ್ಲಿ ಕೂಲಂಕಷ ತನಿಖೆ ನಡೆಸಿದ ಬಳಿಕ ಅದು ಹುಸಿ ಬಾಂಬ್ ಬೆದರಿಕೆ ಎಂದು ಪರಿಗಣಿಸಲಾಯಿತು ಎಂದು ಅವರು ಹೇಳಿದ್ದಾರೆ.

ಬಜೆಟ್ ಅಧಿವೇಶನ ಆರಂಭವಾಗುವ ಕೆಲವೇ ನಿಮಿಷಗಳ ಮುನ್ನ ವಿಧಾನ ಸಭೆಯ ಅಧಿಕೃತ ಈಮೇಲ್ ಐಡಿಗೆ ಈ ಬೆದರಿಕೆ ಸಂದೇಶ ಬಂದಿತ್ತು.

ವಿಧಾನ ಸಭೆಯ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ ಪ್ರತಿಪಾದಿಸಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆಯ ಆವರಣದಿಂದ ತೆರವುಗೊಳ್ಳುವಂತೆ ಎಲ್ಲಾ ಸಿಬ್ಬಂದಿ ಹಾಗೂ ಶಾಸಕರಿಗೆ ಸೂಚಿಸಲಾಯಿತು ಎಂದು ಡಿಎಸ್‌ಪಿ ಪಿಯೂಷ್ ವಂಡಾ ತಿಳಿಸಿದ್ದಾರೆ.

ಬಜೆಟ್ ಅಧಿವೇಶನದ ಭಾಗವಾಗಿ ಸದನ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು. ಆದರೆ, ಬೆಳಗ್ಗೆ 8.45ಕ್ಕೆ ಅಧಿಕಾರಿಗಳಿಗೆ ಬಾಂಬ್ ಬೆದರಿಕೆಯ ಬಗ್ಗೆ ಮಾಹಿತಿ ಸಿಕ್ಕಿತು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries