HEALTH TIPS

ಪಶ್ಚಿಮ ಏಷ್ಯಾ ಸಂಘರ್ಷ: ಪ್ರಧಾನಿ ಮೋದಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಹಾಗೂ ರಾಜ್ಯಗಳ ಸಿದ್ಧತಾ ಯೋಜನೆಗಳ ಕುರಿತು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ವರ್ಚುವಲ್‌ ಆಗಿ ಸಭೆ ನಡೆಸಿದರು.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ಚುನಾವಣೆ ಮಾದರಿ ಸಂಹಿತೆ ಜಾರಿಯಲ್ಲಿರುವ ಕಾರಣ ಆ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿಲ್ಲ.

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ಈ ವಾರದ ಆರಂಭದಲ್ಲಿ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಅಲ್ಲದೆ, ಪ್ರಧಾನಿ ಮೋದಿಯವರು ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟಿನ ಕುರಿತು ಅಧಿಕೃತ ಹೇಳಿಕೆ ನೀಡಿದ್ದರು.

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ಫೆ.28 ರಂದು ಆರಂಭವಾದ ಈ ಸಂಘರ್ಷವು ಜಾಗತಿಕ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಿದೆ.

ಈ ಕುರಿತು ಗುರುವಾರ ಸ್ಪಷ್ಟನೆ ನೀಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, '74 ದಿನಗಳ ಅಗತ್ಯವನ್ನು ಪೂರೈಸುವಷ್ಟು ಕಚ್ಚಾ ತೈಲ ದಾಸ್ತಾನು ಮಾಡಿಕೊಳ್ಳುವ ಸಾಮರ್ಥ್ಯವು ದೇಶಕ್ಕೆ ಇದೆ. ಈಗಲೂ 60 ದಿನಗಳಿಗೆ ಆಗುವಷ್ಟು ಸಂಗ್ರಹ ಇದೆ. ಇದರಲ್ಲಿ ಕಚ್ಚಾ ತೈಲ, ಇಂಧನ ಸೇರಿವೆ' ಎಂದು ಹೇಳಿದೆ.

PM Narendra Modi is chairing the meeting with CMs through video conferencing on the West Asia conflict to review preparedness and plans of states.
881
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries