ನವದೆಹಲಿ: ನಿನ್ನೆ ಬೆಂಗಳೂರಿನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನಕ್ಕೆ ಮಾರ್ಗಮಧ್ಯೆಯೇ ತಾಂತ್ರಿಕ ಅಡಚಣೆ ಎದುರಾಗಿತ್ತು.
ಆರು ಗಂಟೆಗಳ ಹಾರಾಟದ ತರುವಾಯ ವಿಮಾನವನ್ನು ಸೌದಿ ಅರೇಬಿಯಾದ ಜೆಡ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ.
ಇದರಿಂದ ಕೆಲಕಾಲ ಪ್ರಯಾಣಿಕರು ಆತಂಕಗೊಂಡಿದ್ದರು, ಆದರೆ, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾಂತ್ರಿಕ ಸಮಸ್ಯೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಜೆಡ್ಡಾದಲ್ಲಿ ಲ್ಯಾಂಡ್ ಮಾಡಿಸಲಾಯಿತು. ವಿಮಾನವನ್ನು ಪೂರ್ಣ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗೆಗಿನ ವಿವರಗಳನ್ನು ಏರ್ ಇಂಡಿಯಾ ಹಂಚಿಕೊಂಡಿಲ್ಲ.

