ಕೋಲ್ಕತ್ತಾ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಮೂರುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ ಆನಂದ ಬೋಸ್ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಲೋಕ ಭವನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯಪಾಲರ ರಾಜೀನಾಮೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ರಾಜ್ಯಪಾಲರ ಕಚೇರಿಯಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ" ಎಂದು ಆನಂದ ಬೋಸ್ ಹೇಳಿದ್ದು, ಇದು ಸಾಂವಿಧಾನಿಕ ಹುದ್ದೆಯಿಂದ ತೆರಳುವ ಅವರ ನಿರ್ಧಾರವನ್ನು ಸೂಚಿಸುತ್ತದೆ.
ಬೋಸ್ ಅವರು 2022 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆನಂದ ಬೋಸ್ ಮೂಲತಃ ಕೇರಳದವರು.

