HEALTH TIPS

ಕದನ ವಿರಾಮ: ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದ ಇರಾನ್

ಟೆಹರಾನ್: ಕದನ ವಿರಾಮ ಒಪ್ಪಂದ ಕುರಿತು ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ. ಬದಲಾಗಿ, ಮಧ್ಯವರ್ತಿಗಳ ಮೂಲಕ ಮಾತ್ರ ಸಂದೇಶಗಳು ಬರುತ್ತಿವೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಬಘೈ ಹೇಳಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಸೌದಿ ಅರೇಬಿಯಾ, ಈಜಿಪ್ಟ್‌ ಮತ್ತು ಟರ್ಕಿಯ ವಿದೇಶಾಂಗ ಸಚಿವರು ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸಿದ್ದಾರೆ.

ವಿದೇಶಾಂಗ ಸಚಿವರಾದ ಪಾಕಿಸ್ತಾನದ ಇಶಾಕ್‌ ದಾರ್‌, ಸೌದಿಯ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್, ಟರ್ಕಿಯ ಹಕನ್‌ ಫಿದಾನ್‌, ಈಜಿಪ್ಟ್‌ನ ಬದ್ರ್ ಅಬ್ದಲತಿ ಅವರು ಇರಾನ್‌-ಅಮೆರಿಕ, ಇಸ್ರೇಲ್‌ ನಡುವಿನ ಯುದ್ಧ ಮತ್ತು ಇದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೃಷ್ಟಿಯಾಗಿರುವ ತೈಲ, ಅನಿಲ ಬಿಕ್ಕಟ್ಟಿನ ಕುರಿತು ಸಮಗ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಅಮೆರಿಕ ಈಗಾಗಲೇ ಇರಾನ್ ಮುಂದಿಟ್ಟಿರುವ 15 ಅಂಶಗಳ ಕದನ ವಿರಾಮ ಒಪ್ಪಂದ ಮಾತುಕತೆ ಪ್ರಸ್ತಾವದ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

'ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಮಾತ್ರ ಯುದ್ಧವನ್ನು ನಿಲ್ಲಿಸಬಹುದು' ಎಂದಿದ್ದ ಪಾಕಿಸ್ತಾನ, ಈ ನಿಟ್ಟಿನಲ್ಲಿ 'ವಿಶ್ವಾಸಾರ್ಹ ಮಧ್ಯಸ್ಥಿಕೆದಾರನ ಪಾತ್ರ' ವಹಿಸುವುದಾಗಿ ಹೇಳಿತ್ತು.

ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳಿಸುವ ಸಭೆಯನ್ನು ಈ ಮೊದಲು ಟರ್ಕಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್‌ ದಾರ್‌ ಮನವಿಯ ಮೇರೆಗೆ ಇಸ್ಲಾಮಾಬಾದ್‌ಗೆ ಸ್ಥಳಾಂತರಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries