ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರ ಜೊತೆಗೆ ದೂರವಾಣಿ ಮಾತುಕತೆ ನಡೆಸಿದರು.
ಕೊಲ್ಲಿ ರಾಷ್ಟ್ರಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ, ಸಂಕಷ್ಟದ ಸಮಯದಲ್ಲಿ ಯುಎಇನೊಂದಿಗೆ ಭಾರತವು ಗಟ್ಟಿಯಾಗಿ ನಿಲ್ಲಲಿದೆ ಎಂದು ಈ ವೇಳೆ ಭರವಸೆ ನೀಡಿದ್ದಾರೆ.
'ಕೊಲ್ಲಿ ರಾಷ್ಟ್ರಗಳಲ್ಲಿ ನೆಲಸಿರುವ ಭಾರತೀಯರನ್ನು ನೋಡಿಕೊಂಡಿದಕ್ಕಾಗಿ ಧನ್ಯವಾದ ತಿಳಿಸಿರುವ ಅವರು, ಸಂಘರ್ಷ ಕೊನೆಗೊಳಿಸಿ, ಪ್ರಾದೇಶಿಕ ಶಾಂತಿ, ಭದ್ರತೆ ಹಾಗೂ ಸ್ಥಿರತೆ ಸ್ಥಾಪಿಸುವ ಪ್ರಯತ್ನಕ್ಕೆ ಭಾರತವು ಸಹಕಾರ ನೀಡಲಿದೆ' ಎಂದು ಭರವಸೆ ನೀಡಿದ್ದಾರೆ.

