ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆ, ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ, ಮಾಸ್ಟರ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್, ವಿಕಾಸ ಮೀಯಪದವು ಇದರ ನೇತೃತ್ವದಲ್ಲಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠo ಚಾರಿಟೇಬಲ್ ಟ್ರಸ್ಟ್ ಕೊಂಡೆವೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಒನ್ ಸೈಟ್ ಎಸ್ಸಿ ಲೋರ್ ಲಕ್ಸೋಟಿಕ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಜರಗಿದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡವರಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ವಿದ್ಯಾವರ್ಧಕ ಎ.ಯು.ಪಿ ಶಾಲೆಯಲ್ಲಿ ಭಾನುವಾರ ಜರಗಿತು. ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕ ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ಹಾಗೂ ಮಾಸ್ಟರ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ನ ಗೌರವಾಧ್ಯಕ್ಷ ಕೆ.ವಿ ರಾಧಾಕೃಷ್ಣ ಭಟ್ ಪಲಾನುಭವಿಗಳಿಗೆ ಕನ್ನಡಕ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್.ವಿ.ವಿ ಎಚ್ ಎಸ್ ಶಾಲೆಯ ಪಿಟಿಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಮಾಸ್ಟರ್ಸ್ ಕ್ಲಬ್ ನ ಸದಸ್ಯರಾದ ರವಿಶಂಕರ್ ರಾವ್, ರಘುವೀರ್ ರಾವ್ ಹಾಗೂ ಸುರೇಶ್ ಮೀಯಪದವು ಉಪಸ್ಥಿತರಿದ್ದರು.

.jpg)
