ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ-2023ರ ತಿದ್ದುಪಡಿ ರದ್ದುಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
'ಮಾಹಿತಿ ತಂತ್ರಜ್ಞಾನ ಕಾಯ್ದೆಯ ತಿದ್ದುಪಡಿಯು 'ಅಸಾಂವಿಧಾನಿಕ' ಎಂದು ಅದನ್ನು ರದ್ದು ಮಾಡಿರುವ ಬಾಂಬೆ ಹೈಕೋರ್ಟ್‌ನ 2024ರ ತೀರ್ಪಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಖ್ಯ ನಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಆರ್.ಮಹಾದೇವನ್, ಜಾಯ್ ಮಾಲ್ಯಾ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು ಸ್ಟ್ಯಾಂಡ್ ಅಪ್ ಕಮಿಡಿಯನ್ ಕುನಾಲ್ ಕಾಮ್ರಾ ಸೇರಿದಂತೆ ಹಲವು ಮೂಲ ಅರ್ಜಿದಾರರಿಗೆ ನೋಟಿಸ್ ರವಾನಿಸಿದೆ.
ಬಾಂಬೆ ಹೈಕೋರ್ಟ್ 2024ರ ಸೆಪ್ಟೆಂಬರ್ 26ರಂದು ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಿತ್ತು.

