ಲಂಡನ್: ಚೀನಾ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಡಿ ಮೂವರು ಶಂಕಿತರನ್ನು ಬುಧವಾರ ಬಂಧಿಸಲಾಗಿದೆ ಎಂದು ಲಂಡನ್ ಪೊಲೀಸರು ತಿಳಿಸಿದ್ದಾರೆ.
2023ರ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಉಲ್ಲಂಘಿಸಿ, ವಿದೇಶಿ ಗುಪ್ತಚರ ಸೇವೆಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಆರೋಪಿಗಳ ಮೇಲೆ ಯಾವುದೇ ಪ್ರಕರಣ ದಾಖಲಿಸದ ಕಾರಣ ಶಂಕಿತರ ಹೆಸರುಗಳನ್ನು ಬಹಿರಂಗಪಡಿಸಿಲ್ಲ.
ಲಂಡನ್‌ನ ಪ್ರತ್ಯೇಕ ಸ್ಥಳಗಳಲ್ಲಿ 39, 43 ಮತ್ತು 68 ವರ್ಷದ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಆದರೆ, ಈ ಆರೋಪವನ್ನು ಚೀನಾ ನಿರಾಕರಿಸಿದೆ.

