ಮನಿಲಾ: ಫಿಲಿಪೈನ್ಸ್ ರಾಷ್ಟ್ರೀಯ ಇಂಧನ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಭಣಗೊಳ್ಳುತ್ತಿದ್ದಂತೆ ಫಿಲಿಪೈನ್ಸ್ ಈ ನಿರ್ಧಾರವನ್ನು ತೆಗೆದುಕೊಂಡ ವಿಶ್ವದ ಮೊದಲ ರಾಷ್ಟ್ರವಾಗಿದೆ.
ಫಿಲಿಪೈನ್ಸ್ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್ ಅವರು ಇಂಧನ ಭದ್ರತೆಯನ್ನು ಕಾಪಾಡುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ.
ಮಧ್ಯಪ್ರಾಚ್ಯ ಸಂಘರ್ಷದಿಂದ ದೇಶದ ಇಂಧನ ಪೂರೈಕೆಗೆ ಎದುರಾಗಿರುವ ಸನ್ನಿಹತ ಅಪಾಯಕ್ಕೆ ಪ್ರತಿಯಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಿರುವುದಾಗಿ ಹೇಳಿದ್ದಾರೆ.
ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಹಾರ್ಮುಝ್ ಜಲಸಂಧಿ ಮೇಲಿನ ನಿರ್ಬಂಧ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣವನ್ನು ಸೃಷ್ಟಿಸಿದೆ. ಇಂಧನದ ಕೊರತೆ ಮತ್ತು ಬೆಲೆ ಏರಿಕೆಗೆ ಕಾರಣವಾಗಿದೆ.
ಫಿಲಿಪೈನ್ಸ್ ತನ್ನ ತೈಲದ 98% ರಷ್ಟು ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತದೆ ಮತ್ತು ಫೆಬ್ರವರಿ 28ರಂದು ಯುದ್ಧ ಪ್ರಾರಂಭವಾದಾಗಿನಿಂದ ದೇಶದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ದ್ವಿಗುಣಗೊಂಡಿದೆ.

