ಕಠ್ಮಂಡು: ಕಳೆದ ವರ್ಷ ನಡೆದಿದ್ದ ಜೆನ್-ಝಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರಿಗೆ ಮಧ್ಯಂತರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹ ಸಚಿವರ ಬಂಧನ ಖಂಡಿಸಿ ನೇಪಾಳದಲ್ಲಿ ಪ್ರತಿಭಟನೆ ಮುಂದುವರಿದಿದೆ.
ಒಲಿ ಅವರ ಪತ್ನಿ ರಾಧಿಕಾ ಅವರು ಸುಪ್ರೀಂ ಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಈ ಅರ್ಜಿಯನ್ನು ವಜಾಗೊಳಿಸಿದೆ.

