HEALTH TIPS

ಸುಗಮಗೊಂಡ ಮುಸ್ಲಿಂಲೀಗ್ ಅಭ್ಯರ್ಥಿ ಆಯ್ಕೆ-ಕಾಸರಗೋಡಿಗೆ ಕಲ್ಲಟ್ರ ಮಾಹಿನ್ ಹಾಜಿ, ಮಂಜೇಶ್ವರಕ್ಕೆ ಎ.ಕೆ.ಎಂ ಅಶ್ರಫ್

ಕಾಸರಗೋಡು: ಹಾಲಿ ಶಾಸಕ ಎನ್.ಎ ನೆಲ್ಲಿಕುನ್ನು ಸ್ಪರ್ಧಿಸುತ್ತಿರುವ ಕಾಸರಗೊಡು ವಿಧಾನಸಭಾ ಕ್ಷೇತ್ರದಲ್ಲಿ ಕಗ್ಗಂಟಾಗಿದ್ದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಸ್ಲಿಂಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಾದಿಕಲಿ ಶಿಹಾಬ್ ತಙಳ್  ಉಪಸ್ಥಿತಿಯಲ್ಲಿ ಸುಖಾಂತ್ಯ ಕಂಡಿದೆ. ಮುಸ್ಲಿಂಲೀಗ್ ಕಾಸರಗೋಡು ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿ ಅವರನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಐಕ್ಯರಂಗ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಯಿತು. ಮಂಜೇಶ್ವರದಲ್ಲಿ ಹಾಲಿ ಶಾಸಕ ಎ.ಕೆ.ಎಂ ಅಶ್ರಫ್ ಅವರನ್ನು ಅಭ್ಯರ್ಥಿ ಎಂದು ಮುಸ್ಲಿಂ ಲೀಗ್ ಈಗಾಗಲೇ ಘೋಷಿಸಿದ್ದು, ಕಾಸರಗೋಡಿಗೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ವಿಳಂಬವುಂಟಾಗಿತ್ತು. ರಾಜ್ಯದಲ್ಲಿ ಒಟ್ಟು 27ಸೀಟುಗಳಲ್ಲಿ ಮುಸ್ಲಿಂ ಲೀಗ್ ಸ್ಪರ್ಧಿಸುತ್ತಿದೆ. ಈಗಾಗಲೇ 25ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ತಿಗೊಂಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries