ನವದೆಹಲಿ: ಬಿಹಾರ, ಹರಿಯಾಣ, ಒಡಿಶಾ ವಿಧಾನಸಭೆಗಳಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಕೇಂದ್ರ ವೀಕ್ಷಕರನ್ನು ಸೋಮವಾರ ನೇಮಿಸಿದ್ದಾರೆ.
ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಛತ್ತೀಸಗಢ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಅವರನ್ನು ಬಿಹಾರದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಜರಾತ್ ಉಪ ಮುಖ್ಯಮಂತ್ರಿ ಹರ್ಷ ಸಾಂಘವಿ ಅವರನ್ನು ಹರಿಯಾಣದ ವೀಕ್ಷಕರನ್ನಾಗಿ, ಮಹಾರಾಷ್ಟ್ರದ ಸಚಿವ ಚಂದ್ರಶೇಖರ್ ಬಾವಂಕುಲೆ ಅವರನ್ನು ಒಡಿಶಾದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ.

