ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸರಬರಾಜಿನಲ್ಲಿ ದುರುಪಯೋಗವನ್ನು ತಡೆಗಟ್ಟಲು ಮತ್ತು ವಿತರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಬಯೊಮೆಟ್ರಿಕ್ ಆಧಾರ್ ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ.
ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ ಬಯೊಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸುವುದು ಕಡ್ಡಾಯ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಈ ಕುರಿತು, 'ಎಲ್ಲಾ ಗ್ರಾಹಕರು ಬಯೊಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸಬೇಕಾಗುತ್ತದೆ. ಈಗ ನಿಮ್ಮ ಮನೆಯಿಂದಲೇ ತೈಲ ಕಂಪನಿಯ ಮೊಬೈಲ್ ಆಯಪ್ ಮತ್ತು ಆಧಾರ್ ಫೇಸ್‌ಆರ್‌ಡಿ ಅಪ್ಲಿಕೇಶನ್ ಬಳಸಿ' ಎಂದು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಹಾಗೆಯೇ, ಎಲ್‌ಪಿಜಿ ವಿತರಕರನ್ನು ಸಂಪರ್ಕಿಸುವಂತೆ ಸಲಹೆ ನೀಡಿರುವ ಸಚಿವಾಲಯ, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ಹಲವೆಡೆ ಹೋಟೆಲ್‌ಗಳು ಬಂದ್ ಆಗಿವೆ.

