HEALTH TIPS

ಭಾರತದಲ್ಲಿ ಇಂಧನದ ಕೊರತೆಯಿಲ್ಲ ! : ಸಂಸತ್ತಿಗೆ ಮಾಹಿತಿ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ಪಶ್ಚಿಮ ಏಶ್ಯಾ ಬಿಕ್ಕಟ್ಟು ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿಯ ಹೊರತಾಗಿಯೂ ಭಾರತದ ಕಚ್ಚಾತೈಲ ಪೂರೈಕೆ ಸ್ಥಿತಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ಲೋಕಸಭೆಯಲ್ಲಿ ತಿಳಿಸಿದರು.

ಜಗತ್ತು ಇಂಧನ ಕ್ಷೇತ್ರದಲ್ಲಿ ವರ್ತಮಾನದ ಸ್ಥಿತಿಯನ್ನು ಹಿಂದೆಂದೂ ಎದುರಿಸಿರಲಿಲ್ಲ ಎಂದು ಹೇಳಿದ ಪುರಿ, ದಾಖಲಿತ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾರ್ಮುಝ್ ಜಲಸಂಧಿಯನ್ನು ಮುಚ್ಚಲಾಗಿದೆ ಎಂದು ಬೆಟ್ಟು ಮಾಡಿದರು.

ಪಶ್ಚಿಮ ಏಶ್ಯಾದಲ್ಲಿ ಸಂಘರ್ಷಕ್ಕೆ ಭಾರತವು ಯಾವುದೇ ರೀತಿಯಲ್ಲಿ ಕಾರಣವಲ್ಲದಿದ್ದರೂ ಅದರ ಪರಿಣಾಮಗಳನ್ನು ಎದುರಿಸಬೇಕಿದೆ ಎಂದು ಹೇಳಿದ ಅವರು, ತೈಲ ಸಂಸ್ಕರಣಾಗಾರಗಳು ಗರಿಷ್ಠ ಸಾಮರ್ಥ್ಯದಲ್ಲಿ ಕಾರ್ಯಾಚರಿಸುತ್ತಿವೆ. ಹಲವಾರು ಸಂದರ್ಭಗಳಲ್ಲಿ ಅವು ಶೇ.100ಕ್ಕೂ ಹೆಚ್ಚಿನ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತಿವೆ. ಪೆಟ್ರೋಲ್, ಡೀಸಿಲ್, ಸೀಮೆಎಣ್ಣೆ ಅಥವಾ ವಿಮಾನ ಇಂಧನದ ಕೊರತೆಯಿಲ್ಲ. ಈ ಎಲ್ಲ ಇಂಧನಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದರು.

ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ವ್ಯಕ್ತಪಡಿಸಿದ ಕಳವಳಗಳಿಗೆ ಉತ್ತರಿಸಿದ ಪುರಿ, ಭಾರತದಲ್ಲಿಯ 33 ಕೋಟಿ ಕುಟುಂಬಗಳು ಯಾವುದೇ ಇಂಧನ ಕೊರತೆಯನ್ನು ಎದುರಿಸದಿರಲು ಮೋದಿ ಸರಕಾರವು ಅತ್ಯಂತ ಹೆಚ್ಚಿನ ಆದ್ಯತೆ ನೀಡಿದೆ. ಭಾರತವು ವರ್ಷಗಳಿಂದಲೂ ತನಗೆ ಕಚ್ಚಾತೈಲ ಪೂರೈಕೆ ಮೂಲಗಳನ್ನು ವೈವಿಧ್ಯಗೊಳಿಸುತ್ತಲೇ ಬಂದಿದೆ ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ತೈಲ ಸಾಗಣೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries