HEALTH TIPS

ಮ್ಯಾಜಿಸ್ಟ್ರೇಟ್‌ಗಳು ಸಾಕ್ಷ್ಯ ಪರಿಶೀಲಿಸಿದ ನಂತರವೇ ಬಂಧನವಾಗಲಿ: ಕಪಿಲ್‌ ಸಿಬಲ್

ನವದೆಹಲಿ: 'ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಬಿಜೆಪಿಯು ಕಾನೂನನ್ನು ಆಯುಧವಾಗಿಸಿಕೊಳ್ಳುತ್ತಿದೆ' ಎಂದು ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಆರೋಪಿಸಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸ್ಥಳೀಯ ನ್ಯಾಯಾಲಯವು ಖುಲಾಸೆಗೊಳಿಸಿದ ಬೆನ್ನಲ್ಲೇ, ಅವರು ಈ ಹೇಳಿಕೆ ನೀಡಿದ್ದಾರೆ.

'ಮ್ಯಾಜಿಸ್ಟ್ರೇಟ್‌ಗೆ ಮಾಖಿಕ ಹಾಗೂ ಸಾಕ್ಷ್ಯಗಳನ್ನು ತೋರಿಸಿದ ನಂತರವೇ ಬಂಧನಕ್ಕೆ ಅವಕಾಶ ನೀಡಲು ಕಾನೂನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು' ಎಂದು ಈ ವೇಳೆ ಅವರು ಕೋರಿದ್ದಾರೆ.

ಸರ್ಕಾರವು ಮೊದಲು ಬಂಧಿಸಿ, ನಂತರ ಸಾಕ್ಷ್ಯಗಳನ್ನು ಕಲೆಹಾಕುವ ವಸಾಹತುಶಾಹಿ ಮನಃಸ್ಥಿತಿಯನ್ನು ಹೊಂದಿದೆ ಎಂದು ಈ ವೇಳೆ ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries