ಕಾಸರಗೋಡು: ಜಿಲ್ಲೆಯ ಮಲೆನಾಡ ಪ್ರಮುಖ ಪ್ರವಾಸಿ ತಾಣ ರಾಣಿಪುರಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಭೇಟಿ ನೀಡಿದರು. ಈ ಸಂದರ್ಭ ರಾಣಿಪುರಂ ಗಿರಿಧಾಮಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡಲು ಮೂಲಸೌಕರ್ಯ ಹೆಚ್ಚಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರವಾಸಿಗರಿಗಾಗಿ ನಿರ್ಮಿಸಲಾದ ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿಯ ವತಿಯಿಂದ ನಿರ್ಮಿಸಲಾದ ಪ್ರವಾಸೋದ್ಯಮ ಸಂಕೀರ್ಣವನ್ನು ತೆರೆದು ಕಾರ್ಯಚರಿಸುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಣೀಪುರಂ ಸಂದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗೆ ಬೆಳಿಗ್ಗೆ ಒಂದು ಗಂಟೆ ಮುಂಚಿತವಾಗಿ ಪ್ರವೇಶಿಸಲು ಮತ್ತು ಸಂಜೆ ಪ್ರವೇಶಕ್ಕೆ ಹೆಚ್ಚಿನ ಸಮಯವನ್ನು ನೀಡುವ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


