ಗುವಾಹಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರುವ ನಾಯಕರ ಸಂಖ್ಯೆ ಹೆಚ್ಚುತ್ತಿದ್ದು ಗುರುವಾರ ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ.
ಶಾಸಕರಾದ ಕೆ.ಪುರಕಾಯಸ್ಥ, ಶಶಿಕಾಂತ ದಾಸ್ ಮತ್ತು ಬಸಂತ ದಾಸ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇವರು ಕ್ರಮವಾಗಿ ಕರಿಮ್‌ಗಂಜ್ (ಉತ್ತರ), ರಹಾ ಮತ್ತು ಮಾಂಗಲೋಯಿ (ಎಸ್‌ಸಿ) ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಾರೆ.
ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಸೈಕಿಯಾ ಮತ್ತು ಕೇಂದ್ರ ಸಚಿವ ಪಬಿತ್ರ ಮಾರ್ಗರೇಟ್ ಅವರು ಈ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಹಿಂದೆ ಕಾಂಗ್ರೆಸ್ ಮುಖಂಡ ಭೂಪೇನ್ ಬೋರಾ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂವರು ಶಾಸಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆಪ್ತರು ಎನ್ನಲಾಗಿದೆ. ಈ ಹಿಂದೆ ಇವರು ಬಿಜೆಪಿ ನೀತಿಗಳಿಗೆ ಬೆಂಬಲ ಸೂಚಿಸಿದ್ದರು.
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

