ನವದೆಹಲಿ: ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಸೋಮವಾರ ಶೋಧ ನಡೆಸಿದೆ.
'ಕುಪ್ವಾರ ಜಿಲ್ಲೆಯ ಹಂದ್ವಾರ, ಬಾರಾಮುಲ್ಲಾ ಜಿಲ್ಲೆಯ ರಫಿಯಾಬಾದ್, ಕುಲಗಾಮ್ ಮತ್ತು ಶ್ರೀನಗರ ಜಿಲ್ಲೆ ಸೇರಿದಂತೆ 9 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ನವೆಂಬರ್ 10ರಂದು ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ.

