HEALTH TIPS

ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಚಾಲ್ತಿ ಖಾತೆ ಕೊರತೆ ಏರಿಕೆ

ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ದೇಶದ ಚಾಲ್ತಿ ಖಾತೆ ಕೊರತೆ (ಸಿಎಡಿ) ₹1.21 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇ 1.3ರಷ್ಟು ಆಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಇದು ₹1 ಲಕ್ಷ ಕೋಟಿಯಷ್ಟಾಗಿತ್ತು.

ವ್ಯಾಪಾರ ಕೊರತೆ ಹೆಚ್ಚಳವೇ ಚಾಲ್ತಿ ಖಾತೆ ಕೊರತೆ ಏರಿಕೆಗೆ ಕಾರಣ ಎಂದು ತಿಳಿಸಿದೆ.

ಆದರೆ, 2024-25ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ದೇಶದ ಚಾಲ್ತಿ ಖಾತೆ ಕೊರತೆ ₹3.35 ಲಕ್ಷ ಕೋಟಿಯಷ್ಟಿತ್ತು. ಇದು ಪ‍್ರಸಕ್ತ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹2.76 ಲಕ್ಷ ಕೋಟಿಗೆ ಇಳಿದಿದೆ.

ಸರಕುಗಳ ವ್ಯಾಪಾರ ಕೊರತೆ ₹8.58 ಲಕ್ಷ ಕೋಟಿಯಷ್ಟಿದ್ದರೆ, ಸೇವೆಗಳ ನಿವ್ವಳ ಸ್ವೀಕೃತಿ ₹5.2 ಲಕ್ಷ ಕೋಟಿಯಷ್ಟಿದೆ ಎಂದು ತಿಳಿಸಿದೆ.

ವಿದೇಶದಲ್ಲಿ ಉದ್ಯೋಗ ಮಾಡುತ್ತಿರುವ ಭಾರತೀಯರು ತಾಯ್ನಾಡಿಗೆ ₹3.38 ಲಕ್ಷ ಕೋಟಿ ರವಾನಿಸಿದ್ದಾರೆ. ವಿದೇಶಿ ನೇರ ಹೂಡಿಕೆಯ ಹರಿವು ₹33,917 ಕೋಟಿಯಾಗಿದೆ ಎಂದು ಆರ್‌ಬಿಐ ಹೇಳಿದೆ.

ಮೀಸಲು ಸಂಗ್ರಹ ಏರಿಕೆ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹1.77 ಲಕ್ಷ ಕೋಟಿಯಷ್ಟಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹98,068 ಕೋಟಿಯಷ್ಟಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries