HEALTH TIPS

ಇರಾನ್‌ನ ಸೌತ್ ಪಾರ್ಸ್ ಗ್ಯಾಸ್ ಫೀಲ್ಡ್ ಮೇಲೆ ಇಸ್ರೇಲ್ ಇನ್ನು ಮುಂದೆ ದಾಳಿ ಮಾಡುವುದಿಲ್ಲ: ಡೊನಾಲ್ಡ್ ಟ್ರಂಪ್

 ವಾಷಿಂಗ್ಟನ್: ಇರಾನ್‌ನ ಪ್ರಮುಖ ಸೌತ್ ಪಾರ್ಸ್ ಗ್ಯಾಸ್ ಫೀಲ್ಡ್ ಮೇಲೆ ಇಸ್ರೇಲ್ ಇನ್ನು ಮುಂದೆ ದಾಳಿ ಮಾಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಗಗನಕ್ಕೇರಿದೆ. ಈ ಮಧ್ಯೆ ಖತರ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದರ ವಿರುದ್ಧವೂ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. 


"ಮಧ್ಯಪ್ರಾಚ್ಯದಲ್ಲಿ ನಡೆದ ಘಟನೆಗಳಿಂದ ಕೋಪಗೊಂಡ ಇಸ್ರೇಲ್, ಇರಾನ್‌ನಲ್ಲಿರುವ ಸೌತ್ ಪಾರ್ಸ್ ಗ್ಯಾಸ್ ಫೀಲ್ಡ್ ಮೇಲೆ ದಾಳಿ ಮಾಡಿದೆ" ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸೌತ್ ಪಾರ್ಸ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿಯಿಂದ ಅಂತರವನ್ನು ಕಾಯ್ದುಕೊಳ್ಳಲು ಟ್ರಂಪ್ ಮುಂದಾಗಿದ್ದಾರೆ. ಇದು ಕೇವಲ ಇಸ್ರೇಲ್ ಕಾರ್ಯಾಚರಣೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಈ ನಿರ್ದಿಷ್ಟ ದಾಳಿಯ ಬಗ್ಗೆ ಅಮೆರಿಕಕ್ಕೆ ಏನೂ ತಿಳಿದಿರಲಿಲ್ಲ. ಖತರ್ ದೇಶವು ಯಾವುದೇ ರೀತಿಯಲ್ಲಿ, ಯಾವುದೇ ರೂಪದಲ್ಲಿ ಭಾಗಿಯಾಗಿರಲಿಲ್ಲ ಅಥವಾ ಈ ದಾಳಿ ಸಂಭವಿಸುತ್ತದೆ ಎಂಬ ಕಲ್ಪನೆಯೂ ಅದಕ್ಕೆ ಇರಲಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ವಿಶ್ವದ ಅತಿದೊಡ್ಡ ನೈಸರ್ಗಿಕ ಅನಿಲ ಕ್ಷೇತ್ರ ಸೌತ್ ಪಾರ್ಸ್ ಮೇಲೆ ನಡೆದ ಬಾಂಬ್ ದಾಳಿಗೆ ಗಲ್ಫ್‌ನಾದ್ಯಂತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಬೆದರಿಕೆ ಹಾಕಿದ ಬೆನ್ನಲ್ಲೆ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries